ಸುರತ್ಕಲ್: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್ ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರೆಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳದಲ್ಲಿ ನಡೆದಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಮತ್ತು ಹಾಗೂ ಎಸ್. ಐ. ಪುನೀತ್ ಗಾಂವ್ಕರ್ ನೇತೃತ್ವದ ಸುರತ್ಕಲ್ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎರಡು ಟ್ಯಾಂಕರ್, ಪಿಕ್ ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ
ವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್ ಸರಬರಾಜು ಆಗುತ್ತಿದ್ದ ಟ್ಯಾಂಕರ್ ನಿಂದ ಪೆಟ್ರೋಲ್ ಕಳ್ಳತನ ಮಾಡಿ ಅದಕ್ಕೆ ಸೀಮೆ ಎಣ್ಣೆ ಕಲಬೆರೆಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ದಾಳಿಯ ಸಂದರ್ಭದಲ್ಲಿ ಗುಪ್ತ ವಾಗಿ ನಿರ್ಮಿಸಿದ ಅಂಡರ್ ಟ್ಯಾಂಕ್ ಪತ್ತೆಯಾಗಿದೆ. ಎರಡು ಟ್ಯಾಂಕರ್ ಗಳಿಂದ ಪೆಟ್ರೋಲ್ ನ್ನು ಭೂಗತ ಟ್ಯಾಂಕ್ ಗೆ ತುಂಬಿಸಿ ಬಳಿಕ ಟ್ಯಾಂಕರ್ ಗೆ ಸೀಮೆ ಎಣ್ಣೆ ಯನ್ನು ರಾಸಾಯನಿಕ ಮಿಶ್ರಣ ಮಾಡಿ ಕಲಬೆರಕೆ ಮಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಉಪನಿರ್ದೇಶಕರು ಮಾಣಿಕ್ಯ
ಆಹಾರ ನಿರೀಕ್ಷರು ಕೆ. ಪ್ರಮೋದ್ ಕುಮಾರ್ ಹಾಗೂ ಚರಣ್ ಹಾಗೂ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಪುನೀತ್ ಗಾಂವ್ಕರ್ ನೇತೃತ್ವದ ತಂಡ ದಾಳಿ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದೆ.