Ad Widget .

ಗುಜರಾತ್ ವಿಧಾನಸಭಾ ಚುನಾವಣೆ| ಬಿಜೆಪಿಯಿಂದ 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಹಾಲಿ ಸಿಎಂ ಭೂಪೇಂದ್ರ ಪಟೇಲ್ ಅವರು 2017ರ ಚುನಾವಣೆಯಲ್ಲಿ ಗೆದ್ದಿದ್ದ ಘಟ್ಲೋಡಿಯಾದಿಂದ ಈ ಬಾರಿಯೂ ಕಣಕ್ಕಿಳಿಯಲಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಅವರು ಮಜುರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಇತ್ತೀಚೆಗೆ ಸೇತುವೆ ದುರಂತ ಸಂಭವಿಸಿದ್ದ ಮೋರ್ಬಿ ವಿಧಾನಸಭಾ ಕ್ಷೇತ್ರದಿಂದ ಕಾಂತಿಲಾಲ್ ಅಮರತಿಯಾ ಅವರನ್ನು ಕಣಕ್ಕಿಳಿಸಲಾಗಿದೆ.

Ad Widget . Ad Widget . Ad Widget .

ಕಾಂಗ್ರೆಸ್‌ನಿಂದ ಬಂದಿರುವ ಬ್ರಿಜೇಶ್ ಮೆರ್ಜಾ ಅವರು ಈ ಹಿಂದೆ ಇಲ್ಲಿ ಗೆದ್ದಿದ್ದರು. ಪಾಟಿದಾರ್ ಆಂದೋಲನದ ನಾಯಕ ಹಾರ್ದಿಕ್ ಪಟೇಲ್ ಅವರು ತಮ್ಮ ತವರು ಕ್ಷೇತ್ರವಾದ ವಿರಾಮಗಾಮ್‌ನಿಂದ ಸ್ಪರ್ಧಿಸಲಿದ್ದಾರೆ. ಕ್ರಿಕೆಟಿಗ ರವೀಂದ್ರ ಸಿಂಹ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಉತ್ತರ ಜಾಮ್‌ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.‌

182 ಸದಸ್ಯರ ಗುಜರಾತ್‌ ವಿಧಾನಸಭೆಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಡಿಸೆಂಬರ್‌ 1ರಂದು ಮೊದಲ ಹಂತದಲ್ಲಿ ಮತದಾನ ನಡೆಯುವ 89 ಸ್ಥಾನ ಪೈಕಿ 84 ಅಭ್ಯರ್ಥಿಗಳು ಮತ್ತು ಡಿ. 5ರಂದು ಮತದಾನ ನಡೆಯಲಿರುವ 93 ಕ್ಷೇತ್ರಗಳ 76 ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಹೆಸರಿಸಲಾಗಿದೆ.

Leave a Comment

Your email address will not be published. Required fields are marked *