Ad Widget .

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ| ವಿವಿಧ ಕಾರ್ಯಕ್ರಮಗಳ ಅನಾವರಣ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರ್ನಾಟಕದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

Ad Widget . Ad Widget . Ad Widget .

ಪ್ರಧಾನಿ ಮೋದಿಯವರ ಭೇಟಿಯ ಸಂಪೂರ್ಣ ಕಾರ್ಯಕ್ರಮಗಳ ಪಟ್ಟಿ ಕೂಡ ಸಿದ್ಧಗೊಂಡಿದೆ. ನವೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವಂತ ಅವರನ್ನು ಸಚಿವರು ಸ್ವಾಗತಿಸಲಿದ್ದಾರೆ.

ನಂತರ ರಸ್ತೆ ಸಂಚಾರದ ಮೂಲಕ 10.30ಕ್ಕೆ ವಿಧಾನಸೌಧ ತಲುಪುವರು. ಶಾಸಕರ ಭವನದ ಆವರಣದಲ್ಲಿ, ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಉಪಸ್ಥಿತಿಯಲ್ಲಿ, ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಿದ್ದಾರೆ. ನಂತರ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ, ಸಂತ ಶ್ರೀ ವಾಲ್ಮೀಕಿ ಪ್ರತಿಮೆಗೆ ಗೌರವ ಸಲ್ಲಿಸುವರು.

ನಂತರದ ಕಾರ್ಯಕ್ರಮವನ್ನು ಸುಮಾರು 10.42ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸುವ, ದಕ್ಷಿಣ ಭಾರತದ ಮೊದಲ ವಂದೇ ಭಾರತ್​​​ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಎಕ್ಸ್​​ಪ್ರೆಸ್​​​​​​ ರೈಲಿಗೆ ಮೋದಿ ಚಾಲನೆ ನೀಡುವರು. ವಂದೇ ಭಾರತ್​​​​ ಟ್ರೇನ್​​​ ಜತೆಗೆ ಭಾರತ್​​​ ಗೌರವ್​​ ಕಾಶಿ ದರ್ಶನ್​​​ ಕೂಡ ಪ್ಲಾಟ್​​ ನಂ. 7 ಮತ್ತು 8ರಲ್ಲಿ ಚಾಲನೆಗೊಳ್ಳಲಿದೆ.

Leave a Comment

Your email address will not be published. Required fields are marked *