ಕುಂದಾಪುರ: ಸಿಎಂ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅಮಾನತು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಭಾಗವಹಿಸಿದ ಸಮಾವೇಶದಲ್ಲಿ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸುವಂತೆ ಆದೇಶಿಸಿದ್ದ ಬಿ.ಇ.ಒ. ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ನವೆಂಬರ್ 7ರಂದು ಬೈಂದೂರು ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾವೇಶಕ್ಕೆ ಬೈಂದೂರು ವಲಯದ ಎಲ್ಲಾ ಶಿಕ್ಷಕರು ಭಾಗವಹಿಸುವಂತೆ ಮತ್ತು ಶಾಲಾ ಪೋಷಕರನ್ನು ಕರೆತರುವಂತೆ ಆದೇಶಿಸಿದ ಬೈಂದೂರು ಬಿ.ಇ.ಓ. ಮಂಜುನಾಥ್ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯಪಾಲರ ಆದೇಶದ ಅನುಸಾರ ಸರ್ಕಾರದ ಅಧೀನ ಕಾರ್ಯದರ್ಶಿಗಳು ನೀಡಿದ ಆದೇಶದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದು, ಅಮಾನತುಗೊಂಡ ಬಿ.ಇ.ಒ ಅವರನ್ನು ಮಂಗಳೂರಿನ ಡಯಟ್ ಸಂಸ್ಥೆಯಲ್ಲಿ ಲೀನ್ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

Leave a Comment

Your email address will not be published. Required fields are marked *