ಮುರುಘಾ ಶ್ರೀ ವಿರುದ್ದ ಷಡ್ಯಂತ್ರ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಫೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜೇಂದ್ರ, ಬಸವರಾಜನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 1 ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

Ad Widget ... ..

ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಮುರುಘಾ ಮಠದ ಶಾಲೆಯ ಶಿಕ್ಷಕ ರಾಜೇಂದ್ರ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.

Ad Widget

ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕೋಒರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *