ಬಂಟ್ವಾಳ: ಕಬಡ್ಡಿ ಮ್ಯಾಚ್ ಮುಗಿಸ್ಕೊಂಡು ವಾಪಾಸಾಗ್ತಿದ್ದ ಆಟೋ ಚಾಲಕನ ಮೇಲೆ ತಲ್ವಾರ್ ದಾಳಿ

ಸಮಗ್ರ ನ್ಯೂಸ್: ಆಟೋ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ.

Ad Widget ... ..

ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30) ಹಲ್ಲೆಗೊಳಗಾದ ಆಟೋ ಚಾಲಕ. ಶಾಕೀರ್ ಕಬಡ್ಡಿ ಮ್ಯಾಚ್ ಮುಗಿಸಿಕೊಂಡು ಮನೆಗೆ ಆಟೋದಲ್ಲಿ ಹಿಂತಿರುಗುತ್ತಿದ್ದ. ಈ ವೇಳೆ ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ಆಟೋವನ್ನು ತಡೆದು ನಿಲ್ಲಿಸಿ ನಾಲ್ವರ ತಂಡ ತಲವಾರಿನಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದೆ.

Ad Widget

ಹಲ್ಲೆಗೊಳಗಾದ ಶಾಕೀರ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *