ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸೇರಿ, ೧೦ ಮಂದಿ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ.
ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಲಾರಿ ಹಾಗೂ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುವ ಬಸ್ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿರುವುದಾಗಿ ಬಸ್ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.
ಗಾಯಗೊಂಡ ಮೂರು ಮಂದಿ ಗಾಯಾಳುಗಳನ್ನು ಸ್ಥಳೀಯ ಅರಂತೋಡು ಸೊಸೈಟಿಯ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಇನ್ನೋರ್ವ ಗಾಯಾಳು ಬಸ್ಸಿನ ಒಳಗೆ ಸಿಲುಕಿದ್ದು, ಅವರನ್ನು ಹೊರತೆಗೆಯಲು ಸೀಟ್‌ನ ರಾಡ್ ಕಟ್ ಮಾಡಿ ತೆಗೆದು ಬಳಿಕ ಸರಕಾರಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯದತ್ತ ಕೊಂಡೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.