ಸಮಗ್ರ ನ್ಯೂಸ್: ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ನ.15ರ ಸಂಜೆ ಮಾಣಿ ಮೈಸೂರು ರಾ.ಹೆದ್ದಾರಿಯ ಕಲ್ಲುಗುಂಡಿ ಎಂಬಲ್ಲಿ ಘಟನೆ ನಡೆದಿದ್ದು, ಹಲವಾರು ಮಂದಿ ಗಾಯಗೊಂಡಿದ್ದರು. ಈ ಪೈಕಿ ಕೆಲವರನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ.
ಬಸ್ ಗೆ ಲಾರಿ ಡಿಕ್ಕಿಯಾದ ವೇಳೆ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಚಾಲಕ ತನ್ನ ಊರಾದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳುತ್ತಿದ್ದ ವೇಳೆ ಕುಶಾಲನಗರ ತಲುಪುವ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.