ಮಂಗಳೂರು: ನೇಣಿಗೆ ಕೊರಳೊಡ್ಡಿದ ಭಾಗವತ ಕೀರ್ತನ್ ವಗೆನಾಡು| ಕಾರಣ ಇಷ್ಟೇ…

ಸಮಗ್ರ ನ್ಯೂಸ್: ಯಕ್ಷಗಾನ ಭಾಗವತರೊಬ್ಬರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ‌. ಇವರು ಇಂದು(ನ.18) ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget ... ..

ಕೀರ್ತನ್ ಅವರು ಈ ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು.

Ad Widget

ದಂಪತಿ‌ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *