ಸಮಗ್ರ ನ್ಯೂಸ್ : ಕಾಡಾನೆ ದಾಳಿಗೆ ಮಹಿಳೆ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹುಲೇಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ.
ಶೋಭಾ (45) ಮೃತ ದುರ್ದೈವಿ. ಇವರು ಜಾನುವಾರುಗಳಿಗೆ ಹುಲ್ಲು ತರಲು ಹೋದಾಗ ಕಾಡಾನೆ ದಾಳಿ ನಡೆಸಿದ್ದು ಮಹಿಳೆಯ ಶವವನ್ನು ಕಾಡಾನೆ ನಜ್ಜುಗುಜ್ಜು ಮಾಡಿದೆ.
ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಜನರು ಆತಂಕದಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳು ಮನೆ ಸಮೀಪವೇ ಬರುತ್ತಿದ್ದು ಜನರು ಭಯಭೀತರಾಗಿದ್ದಾರೆ.
ಹಗಲೇ ನಡೆದ ಘಟನೆಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿದ್ದಾರೆ. ಕಾಡಾನೆಗಳು ಊರಿನಲ್ಲಿ ಇದ್ದರು ಅರಣ್ಯ ಇಲಾಖೆ ತಿಳಿಸಿದರೆ ಅವುಗಳನ್ನು ಕಾಡಿಗಟ್ಟಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.