ಸಮಗ್ರ ನ್ಯೂಸ್: ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ.
ಆ ಮಾತನ್ನು ಹಿಂಪಡೆಯುತ್ತೇನೆಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಹೇಳಿದ್ದಾರೆ. ಕುಮಾರಸ್ವಾಮಿಯವರು ಆಕ್ರೋಶಗೊಂಡು ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಬಗ್ಗೆ ಮಾತನಾಡುತ್ತಾ ಕೆಟ್ಟ ಭಾಷೆಯಲ್ಲಿ ನಿಂದಿಸಿದ್ದರು.
ಇದರ ವಿಡಿಯೋ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. ಕುಮಾರಸ್ವಾಮಿಯವರು ಬಳಸಿದ ಪದಗಳಿಗೆ ಟೀಕೆಗಳು ವ್ಯಕ್ತವಾಗ ತೊಡಗಿದವು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ.