ಬೆಳ್ತಂಗಡಿ: ರಿಕ್ಷಾ-ಬೈಕ್ ಡಿಕ್ಕಿ; ಯುವಕ ಮೃತ್ಯು

ಸಮಗ್ರ ನ್ಯೂಸ್: ರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ‌ ಸಂಭವಿಸಿ ಯುವಕ ಸಾವನ್ನಪ್ಪಿದ ಘಟನೆ ಮಡಂತ್ಯಾರ್ ಸಮೀಪದ ಪಾರೆಂಕಿ ರಸ್ತೆಯಲ್ಲಿ ಸಂಭವಿಸಿದೆ.

Ad Widget ... ..

ಮಡಂತ್ಯಾರ್ ಸೆಕ್ರೆಟ್ ಹಾರ್ಟ್ ಕಾಲೇಜಿನ ಪ್ರಥಮ ವರ್ಷ ಪದವಿ ವಿದ್ಯಾರ್ಥಿ ಪಾರೆಂಕಿಯ ಶಿವಪ್ರಸಾದ್ ಮೃತಪಟ್ಟವರು. ಇವರು ಕಾಲೇಜಿನಿಂದ ಸಂಜೆ ಮನೆಗೆ ತೆರಳುತ್ತಿದ್ದಾಗ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.

Ad Widget
ಶಿವಪ್ರಸಾದ್

ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಧ್ಯರಾತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *