ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ವಾಯುಭಾರ ಕುಸಿತ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಇಂದು ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುನ್ಸೂಚನೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ, ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.