ಬೆಂಗಳೂರು: ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಪಿಎಫ್ಐ ನಿಷೇಧ ಆದೇಶ ಪ್ರಶ್ನಿಸಿ ಪಿಎಫ್ಐ ಮುಖಂಡ ನಾಸಿರ್ ಅಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಇಂದು ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರದ ತೀರ್ಪನ್ನು ಎತ್ತಿ ಹಿಡಿದಿದೆ.
ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಸೆ. 28ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.