ಬೆಂಗಳೂರು: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಪರೀಕ್ಷೆ ಇಲ್ಲದೇ ಗ್ರೇಡ್ ಮೂಲಕ ಬಡ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.