Ad Widget .

ಪುತ್ತೂರಲ್ಲೂ ವೋಟರ್ ಐಡಿ ಹಗರಣದ ವಾಸನೆ| ಜನಸೇವಾ ಕೇಂದ್ರಕ್ಕೆ ಬೀಗ ಜಡಿದ ಎಸಿ!!

ಸಮಗ್ರ ನ್ಯೂಸ್: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ‌ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ಸೋಮವಾರ(ಡಿ.5) ಸಂಜೆ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪುತ್ತೂರಿನ ವ್ಯಕ್ತಿಯೊಬ್ಬರ ಮತದಾರನ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿದ್ದರು. ವೋಟರ್ ಐಡಿ ಮತ್ತೆ ದೊರಕಿಸುವ ಸಂಬಂಧ ಆನ್ ಲೈನ್ ಅರ್ಜಿ ಪ್ರಕ್ರಿಯೆ ನಡೆಸಿ ಕೇಂದ್ರದಲ್ಲೇ ಗುರುತಿನ ಚೀಟಿ ಮುದ್ರಿಸಿ ಕೊಡಲಾಗಿದೆ ಎಂದು ಆಪಾದಿಸಲಾಗಿದೆ.

Ad Widget . Ad Widget . Ad Widget .

ಗುರುತಿನ ಚೀಟಿಯ ಮೇಲೆ ಅನುಮಾನ ಬಂದ ಕಾರಣ ಅವರು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ ತೆರಳಿ ತೋರಿಸಿದರು ಎನ್ನಲಾಗಿದೆ. ಅಧಿಕಾರಿಗಳು ತಪಾಸಣೆ ನಡೆಸಿದಾಗ ಹೊರಗಿನ‌ ಕೇಂದ್ರದಲ್ಲಿ ವೋಟರ್ ಐಡಿ ಕೊಟ್ಟಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ ತನಿಖೆ ಮಾಡಿದೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಅಪರಾಧ ಮಾಡಿರುವುದು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *