ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ.
ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. ಆ ಮೂಲಕ ಮೊದಲ ಬಾರಿಗೆ, MCD ಚುನಾವಣೆಯಲ್ಲಿ ಟ್ರಾನ್ಸ್ ಜೆಂಡರ್ ಸಮುದಾಯದ ಸದಸ್ಯರೊಬ್ಬರು ಪಾಲಿಕೆಗೆ ಆಯ್ಕೆಯಾಗಿ ಬಂದಿದ್ದಾರೆ. ಬೋಬಿ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ವರುಣಾ ಢಾಕಾ ಅವರನ್ನು 6,714 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಪಕ್ಷವನ್ನು ಪ್ರತಿನಿಧಿಸಲು ಆಯ್ಕೆಯಾದ ನಂತರ, ತನ್ನ ಕ್ಷೇತ್ರವನ್ನು ಸುಂದರಗೊಳಿಸಲು ಮತ್ತು ತನ್ನ ನೆರೆಹೊರೆಯವರ ಜೀವನವನ್ನು ಸುಧಾರಿಸಲು ಬಯಸುವುದಾಗಿ ಬೋಬಿ ಹೇಳಿದ್ದರು. ಅಂತೆಯೇ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಯಿಂದ ಭ್ರಷ್ಟಾಚಾರವನ್ನು ತೊಡೆದುಹಾಕಲು ತಾನು ಕೆಲಸ ಮಾಡುತ್ತೇನೆ ಎಂದು ಬೋಬಿ ಪ್ರಮಾಣ ಮಾಡಿದ್ದರು. ಇದೀಗ ಅಭೂತಪೂರ್ವ ರೀತಿಯಲ್ಲಿ ಅವರು ಜಯಗಳಿಸಿದ್ದಾರೆ. ಬುಧವಾರ ಪ್ರಕಟಲವಾಗುತ್ತಿರುವ ಪಾಲಿಕೆ ಚುನಾವಣೆಯ ಫಲಿತಾಂಶದಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ 250 ವಾರ್ಡ್ಗಳ ಮತಗಳ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷವು 125ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.