ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿ ಕಡ್ಡಾಯ:ಯೋಗಿ ಆದಿತ್ಯನಾಥ್

ಲಕ್ನೋ: ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳನ್ನು ತಡೆಯುವ ಉದ್ದೇಶದಿಂದ ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶಿಸಿದ್ದಾರೆ.

. Ad Widget . Ad Widget . Ad Widget .

ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಬಿಹಾರದಂತಹ ಉತ್ತರದ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ಹಿಂಸಾಚಾ ಘಟನೆಗಳು ವಿಶೇಷವಾಗಿ ಸಾಮಾನ್ಯವಾಗಿದ್ದು, ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಮತ್ತು ಬಾಲಕಿಯರ ಮೇಲಿನ ಅತ್ಯಾಚಾರದ ಘಟನೆಗಳು ದೈನಂದಿನ ಘಟನೆಯಾಗಿ ಮಾರ್ಪಟ್ಟಿದ್ದುಇದನ್ನು ತಡೆಗಟ್ಟಲು ಸಿಎಂ ಕ್ರಮ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *