ಕೊಟ್ಟಿಗೆಹಾರ: ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಸಮಗ್ರ ನ್ಯೂಸ್: ಅಪಘಾತದಲ್ಲಿ ಸಾವನ್ನಪ್ಪಿದ ಪುತ್ರನ ಅಂಗಾಂಗವನ್ನು ಪೋಷಕರು ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿಯಲ್ಲಿ ನಡೆದಿದೆ.

. Ad Widget . Ad Widget . Ad Widget .

ಧನ್ಯ ಕುಮಾರ್(37) ಮೃತರು. ಇವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು
ಎಷ್ಟೇ ಪ್ರಯತ್ನಪಟ್ಟರೂ ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು ತಿಳಿಸಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಆದರೆ ಧನ್ಯಕುಮಾರ್ ದೇಹದ ಇತರೆ ಭಾಗಗಳು ಸುರಕ್ಷಿತವಾಗಿವೆ ವೈದ್ಯರು ಹೇಳಿದ್ದರು. ಈ ಕಾರಣ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ.

ಸದ್ಯ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೀತಿರೋ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳನ್ನು ದಾನ ಮಾಡಿದ್ದಾರೆ.

Leave a Comment

Your email address will not be published. Required fields are marked *