ಸಮಗ್ರ ನ್ಯೂಸ್: ಇನೋವಾ ಕಾರೊಂದು ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಸುಳ್ಯ ಮೂಲದ ಇಬ್ಬರು ಮೃತಪಟ್ಟಿದ್ದು ಹಾಗೂ ನಾಲ್ವರು ತೀವ್ರ ಗಾಯಗೊಂಡ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಸಂಭವಿಸಿದೆ.
ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ಶಾಹಿನಾ(28) ಹಾಗೂ ಮಗು ೩ ವರ್ಷ ಪ್ರಾಯದ ಶಜಾ ಮೃತಪಟ್ಟಿದ್ದಾರೆ. ಇನ್ನೂ ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ತರಲಾಗಿದೆ.
ಮದುವೆ ಕಾರ್ಯಕ್ರಮವನ್ನು ಮುಗಿಸಿ ಸುಳ್ಯ ಕಡೆ ಬರುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಸ್ಕಿಡ್ ಆಗಿದ್ದು ರಸ್ತೆ ಬದಿ ಪಲ್ಟಿ ಯಾಗಿದೆ. ಇನ್ನೂ ಪಕ್ಕದಲ್ಲಿ ಪಯಶ್ವಿನಿ ನದಿ ಹರಿಯುತ್ತಿದ್ದು ಭಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ. ಇನ್ನೂ ರಸ್ತೆಯ ಬದಿ ಕೇಬಲ್ ಕೆಲಸ ಮಾಡುವವರು ಮಣ್ಣು ತೆಗೆದು ರಸ್ತೆ ಬದಿ ಹಾಕಿರುದರಿಂದ ಕಾರು ಸ್ಕಿಡ್ ಆಗಿದೆ ಎನ್ನಲಾಗಿದೆ.






