ಸಮಗ್ರ ನ್ಯೂಸ್: ಪೋಸ್ಕೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಜೈಲು ಪಾಲು ಆಗಿದ್ದಾರೆ. ಈ ಹಿನ್ನಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಚಿತ್ರದುರ್ಗ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹಲ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ಸೆ.1ರಿಂದ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹೀಗಾಗಿ ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಧೆಯ ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಮಸ್ಯೆ ಉಂಟಾಗಿದೆ ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಮಠದ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಠಿಯಿಂದ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಈ ಕೂಡಲೋ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದ್ದಾರೆ.