ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.

Ad Widget ... ..

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

Ad Widget

ನ6 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1ಕ್ಕೆ 1,40,790 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 20070 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.

ಪತ್ರಿಕೆ 2ಕ್ಕೆ 1,92,066 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 41,857 ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಪತ್ರಿಕೆ-1 ಮತ್ತು ಪತ್ರಿಕೆ-2ರಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 3,32,856 ಅಭ್ಯರ್ಥಿಗಳಲ್ಲಿ 61,297 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದಾರೆ.

Leave a Comment

Your email address will not be published. Required fields are marked *