ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ ,ಮೀಸಲಾತಿ ವಿಚಾರ| ಸರ್ಕಾರಕ್ಕೆ ದಂಡದ ರುಚಿ ತೋರಿದ ಹೈಕೋರ್ಟ್

ಸಮಗ್ರ ನ್ಯೂಸ್: ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

Ad Widget ... ..

ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದೆ.

Ad Widget

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತೆ 90 ದಿನ ಕಾಲಾವಕಾಶ ಕೋರಿದ ರಾಜ್ಯ ಸರ್ಕಾರದ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್ ದಂಡದ ರುಚಿ ತೋರಿಸಿದೆ.

Leave a Comment

Your email address will not be published. Required fields are marked *