ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ|18 ವಿದ್ಯಾರ್ಥಿಗಳಿಗೆ ಗಾಯ

ಸಮಗ್ರ ನ್ಯೂಸ್: ಶಾಲಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಬಳಿ ನಡೆದಿದೆ.

Ad Widget ... ..

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬಸ್‍ನಲ್ಲಿದ್ದ 18 ಮಕ್ಕಳಿಗೆ ಗಾಯವಾಗಿದ್ದು, 5 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ.

Ad Widget

ಗಾಯಾಳು ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *