ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ

ಸಮಗ್ರ ನ್ಯೂಸ್: ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ(ಡಿ.19)ದಿಂದ ಆರಂಭಗೊಳ್ಳುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ವಿವಾದದ ಹಿನ್ನೆಲೆಯಲ್ಲಿ ಈ ಬಾರಿ ಕಲಾಪದಲ್ಲಿ ಕಾವೇರಿದ ಚರ್ಚೆಗಳು ನಡೆಯಲಿದೆ.

. Ad Widget . Ad Widget . Ad Widget

ಮಹಾದಾಯಿ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಕಬ್ಬು ಬೆಳೆಗಾರರ ಬಾಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ, ವಿವಿಧ ಸಮುದಾಯಗಳ ಮೀಸಲಾತಿ ವಿಚಾರ, ಪಿಎಸ್ಸೈ ನೇಮಕಾತಿಯಲ್ಲಿನ ಅಕ್ರಮ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ, ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಹಲವಾರು ವಿಷಯಗಳು ಈ ಬಾರಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.

. Ad Widget .

ಇದು ಚುನಾವಣಾ ವರ್ಷವಾಗಿರುವುದರಿಂದ ರಾಜ್ಯ ಸರಕಾರದ ಲೋಪಗಳನ್ನು ಎತ್ತಿ ತೋರಿಸಲು ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯತಂತ್ರ ರೂಪಿಸಿವೆ. ಅದೇ ರೀತಿ, ವಿರೋಧ ಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಆಡಳಿತ ಪಕ್ಷ ಬಿಜೆಪಿಯೂ ಸನ್ನದ್ದುಗೊಂಡಿದೆ.

Leave a Comment

Your email address will not be published. Required fields are marked *