ಚೀನಾದಲ್ಲಿ ಕೋವಿಡ್ ಹೆಚ್ಚಳ| ಭಾರತದಲ್ಲಿ ಮತ್ತೆ ಮುನ್ನಲೆಗೆ ಬಂದ ಮಾರ್ಗಸೂಚಿ| ಮಾಸ್ಕ್ ಕಡ್ಡಾಯಕ್ಕೆ ಸೂಚಿಸಿದ ಕೇಂದ್ರ?

ಸಮಗ್ರ ನ್ಯೂಸ್: ಚೀನಾ ,ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಯುಎಸ್ನಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೋವಿಡ್ ಪರಿಶೀಲನಾ ಸಭೆ ನಡೆಸಿದರು.

Ad Widget ... ..

ಈ ವೇಳೆ ಮಾತನಾಡಿದ ಅವರು ವಿದೇಶಗಳಲ್ಲಿ ಕೋವಿಡ್ ಗಣನೀಯವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಭಾರತದ ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸುವಂತೆ ಸೂಚಿಸಿದ್ದಾರೆ.

Ad Widget

ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದು ಸಚಿವರು, ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಪ್ರಕರಣಗಳ ಜಾಡು ಹಿಡಿಯುವಂತೆ ಸೂಚಿಸಿದ್ದಾರೆ. ಇದರ ಜೊತೆಗೆ ಹೆಚ್ಚಿನ ಜನರು ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *