ಮುಗಿಯದ ಎರಡು ಜಡೆ ಕಚ್ಚಾಟ: ಮೈಸೂರು ಡಿಸಿ ಮತ್ತು ಸಿಇಒ ಎತ್ತಂಗಡಿ

Ad Widget ... ..

ಮೈಸೂರು: ಪರಸ್ಪರ ಕೆಸರೆರಚಾಟದ ಮೂಲಕ ರಾಜ್ಯದ ಗಮನ ಸೆಳೆದ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಆ ಮೂಲಕ ಇಬ್ಬರ ನಡುವಿನ ಸಂಘರ್ಷವನ್ನು ಶಮನಗೊಳಿಸುವ ಪ್ರಯತ್ನ ಮಾಡಿದೆ. ಕಳೆದ ಕೆಲವು ದಿನಗಳಿಂದ ಸಂಘರ್ಷದಲ್ಲಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Ad Widget

ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ಹಾಗೂ ಶಿಲ್ಪಾ ನಾಗ್ ಅವರನ್ನು ಆರ್​​ಡಿಪಿಆರ್ ನಿರ್ದೇಶಕರಾಗಿ ವರ್ಗಾವಣೆ ಮಾಡುವ ಮೂಲಕ ಸರ್ಕಾರ ಒಟ್ಟು ಆರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಇನ್ನು ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ವರ್ಗಾವಣೆಗೊಂಡಿದ್ದಾರೆ.

Leave a Comment

Your email address will not be published. Required fields are marked *