ಸಮಗ್ರ ನ್ಯೂಸ್: ಪ್ರತ್ಯೇಕವಾಗಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಒಬ್ಬ ಕಾಲೇಜು ವಿದ್ಯಾರ್ಥಿ ಸೇರಿದಂತೆ ಮೂವರು ದಾರುಣವಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.
ಸಾಗರ ತಾಲೂಕಿನ ಖೈರಾ ಸಮೀಪ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಸಾಗರದ ಪಾಲಿಟೆಕ್ನಿಕ್ ಕಾಲೇಜ್ ವಿದ್ಯಾರ್ಥಿ ಎಲ್ಡ್ರನ್ ಫರ್ನಾಂಡಿಸ್ (17 ) ಮೃತ ದುರ್ದೈವಿ. ಈತ ಆನಂದಪುರ ಸಮೀಪದ ಯಡೆಹಳ್ಳಿಯ ನಿವಾಸಿ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಸಾಗರ ತಾಲ್ಲೂಕಿನ ಹೊಸಂತೆ ಗ್ರಾಮದಲ್ಲಿ ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಸಾಗರದ ಚನ್ನಾಪುರದ ಪ್ರಮೋದ್(23), ಶಿವಮೊಗ್ಗದ ಆಸಿಫ್ (21) ಮೃತಪಟ್ಟವರು. ಪ್ರಮೋದ್ ಅವರ ಅಜ್ಜಿ ದೇವಮ್ಮ(70) ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






