ಗರ್ಭಿಣಿಯಾದ 8ನೇ ತರಗತಿ ವಿದ್ಯಾರ್ಥಿನಿ| ಮೂವರಿಂದ ಅತ್ಯಾಚಾರ ಶಂಕೆ

ಸಮಗ್ರ ನ್ಯೂಸ್: ಎಂಟನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾಚಾರ ನಡೆದಿರುವ ಅನುಮಾನಗಳು ವ್ಯಕ್ತವಾಗಿವೆ. ಕೊಪ್ಪಳ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ.

Ad Widget ... ..

ಆರು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ ಪೋಷಕರಿಗೆ ಗೊತ್ತಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಪೋಷಕರು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ.

Ad Widget

ಬಾಲಕಿ ಅತ್ಯಾಚಾರದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾಳೆ ಎಂದು ತಿಳಿದು ಬಂದಿದೆ. ಆಕೆಯ ದೈಹಿಕ ಬದಲಾವಣೆ ಕಂಡು ಪೋಷಕರು ವಿಚಾರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ

Leave a Comment

Your email address will not be published. Required fields are marked *