ಸಮಗ್ರ ನ್ಯೂಸ್: ಸುರತ್ಕಲ್ ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸಗೈದಿದ್ದು, ಯುವಕನೊಬ್ಬನಿಗೆ ಇಂದು ಸಂಜೆ ಚಾಕು ಇರಿದ ಘಟನೆ ಸುರತ್ಕಲ್ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದೆ.
ಕೃಷ್ಣಪುರ 4ನೇ ಬ್ಲಾಕ್ ನ ನಿವಾಸಿ ಜಲೀಲ್ ಚೂರಿ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ. ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಚೂರಿ ಇರಿತಕ್ಕೆ ಒಳಗಾದ ಯುವಕನ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ