ಜಲೀಲ್ ಹತ್ಯೆ ಪ್ರಕರಣ| ಇಬ್ಬರು ಮಹಿಳೆಯರ ವಿಚಾರಣೆ| ಕೊಲೆಯ ಹಿಂದೆ ಇದೆಯಾ ಗಾಂಜಾ ಘಮಲು?

ಸಮಗ್ರ ನ್ಯೂಸ್: ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಜಲೀಲ್‌ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Ad Widget ... ..

ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಅವರಿಗೆ ಗಾಂಜಾ ಮಾಫಿಯಾ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

Ad Widget

ಡಿ24ರ ಶನಿವಾರ ಸಂಜೆ ಜಲೀಲ್‌ ಅಂಗಡಿಯಲ್ಲಿದ್ದ. ಆಗ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಈ ಬಗ್ಗೆ ಅಲ್ಲೇ ಇದ್ದ ಪ್ರತ್ಯಕ್ಷದರ್ಶಿಗಳು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ಆದರೆ ಆರೋಪಿಗಳು ಯಾರು ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ.ಅನುಮಾನ ಇದ್ದ ಹಲವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಸುರತ್ಕಲ್ ಠಾಣೆಗೆ ಇಬ್ಬರು ಮಹಿಳೆಯರನ್ನು ಕರೆಸಿಕೊಂಡ ಪೊಲೀಸರು ಸಾಕಷ್ಟು ವಿಚಾರಣೆ ನಡೆಸಿದ್ದಾರೆ.

Leave a Comment

Your email address will not be published. Required fields are marked *