ಸಮಗ್ರ ನ್ಯೂಸ್: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ದೇಶಾದ್ಯಂತ 196 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ.
ಒಟ್ಟಾರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4.46 ಕೋಟಿಗೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ 3,428 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಸದ್ಯಕ್ಕೆ ಕೋವಿಡ್ ಸೋಂಕಿನ ದೈನಂದಿನ ದರವು 0.56 ಪ್ರತಿಶತದಷ್ಟಿದ್ದು, ವಾರದ ಪಾಸಿಟಿವಿಟಿ ದರ 0.16 ಇದೆ. ಕಳೆದ 24 ಗಂಟೆಗಳಲ್ಲಿ 35,173 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಚೇತರಿಕೆ ಪ್ರಮಾಣ ಶೇ 98.80 ಇದ್ದು, ಇದುವರೆಗೆ 4,41,43,179 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ ಶೇಕಡಾ 1.19 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ 220.05 ಕೋಟಿ ಕೋವಿಡ್ ಡೊಸ್ ನೀಡಲಾಗಿದೆ.