ಸಮಗ್ರ ನ್ಯೂಸ್: ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿದ, ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಡುವುಡು ಬೇಡ ಎಂದು ಶಿವಮೊಗದಲ್ಲಿ ವಿವಿಧ ಸಂಘಟನೆಗಳಿಂದ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲು ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಭೇಟಿ ಆಗಮಿಸುವ ಮುನ್ನವೇ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ರಾಷ್ಟ್ರ, ರಾಜ್ಯದ ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ. ಅದರಲ್ಲೂ ಕುವೆಂಪು ಅವರ ನಾಡಗೀತೆಯ ಸಾಹಿತ್ಯವನ್ನು ಒಳ ಉಡುಪಿಗೆ ಹೋಲಿಸಿ ವಿಕೃತಿ ಮೆರೆದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ. ಕುವೆಂಪು ಅವರ ಕುರಿತು ಮುಖ್ಯ ಭಾಷಣ ಮಾಡುವ ಅರ್ಹತೆ ಅವರಿಗಿಲ್ಲ ಎಂದು ಕಿಡಿಕಾರಿದ್ದಾರೆ.