ಸಮಗ್ರ ನ್ಯೂಸ್: ಜನಪ್ರಿಯ ಮತ್ತು ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಐಯಾನಿಕ್ 5 ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಹ್ಯುಂಡೈ ಕಂಪನಿಯು ಈ ಹೊಸ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ.
ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಆನ್‌ಲೈನ್‌ನಲ್ಲಿ ಅಥವಾ ಆಯ್ದ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಬುಕ್ಕಿಂಗ್ ಟೋಕನ್ ಮೊತ್ತ ರೂ.1 ಲಕ್ಷವಾಗಿದೆ. ಈ ಹೊಸ ಹುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕಾರು CKD ಮಾರ್ಗದ ಮೂಲಕ ಬರಲಿದೆ ಮತ್ತು ಭಾರತದಲ್ಲಿ ಜೋಡಣೆಗೊಳ್ಳಲಿದೆ. ಈ ಬಹುನಿರೀಕ್ಷಿತ ಹೊಸ ಹ್ಯುಂಡೈ ಐಯಾನಿಕ್ 5 ಎಲೆಕ್ಟ್ರಿಕ್ ಕ್ರಾಸ್‌ಒವರ್ ದಕ್ಷಿಣ ಕೊರಿಯಾದ ವಾಹನ ತಯಾರಕರ ಪ್ರಸಿದ್ಧ ಮತ್ತು ಸುಧಾರಿತ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಅನ್ನು ಬಳಸುತ್ತದೆ.
ಈ ಹೊಸ ಹ್ಯುಂಡೈ ಎಲೆಕ್ಟ್ರಿಕ್ ಮಾದರಿಯು ಆಗಿದ್ದು, ಹೊರಭಾಗದಲ್ಲಿ ಭವಿಷ್ಯದ ವಿನ್ಯಾಸವನ್ನು ಹೊಂದಿದೆ. ಇದು ಪಿಕ್ಸಲೇಟೆಡ್ LED ಟೈಲ್-ಲೈಟ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಗಳೊಂದಿಗೆ ಡ್ಯುಯಲ್ LED ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಈ ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ ಡ್ಯುಯಲ್ ಫ್ಲೋಟಿಂಗ್ ಸ್ಕ್ರೀನ್ ಮತ್ತು 2-ಸ್ಪೋಕ್ ಸ್ಟೀರಿಂಗ್ ವೀಲ್‌ನೊಂದಿಗೆ ಆಕರ್ಷಕ ಒಳಾಂಗಣದೊಂದಿಗೆ ಬರುತ್ತದೆ. ಈ ಕಾರಿನಲ್ಲಿ 12.3-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ನೀಡಲಾಗಿದೆ,
ಇದರೊಂದಿಗೆ ಡ್ರೈವರ್ ಡಿಸ್‌ಪ್ಲೇಗಳು, 360 ಡಿಗ್ರಿ ಕ್ಯಾಮೆರಾ, ಪನೋರಮಿಕ್ ಸನ್‌ರೂಫ್, V2L (ವಾಹನ 2 ಲೋಡ್) ವೈಶಿಷ್ಟ್ಯಗಳು ಮತ್ತು ಇತರವುಗಳೊಂದಿಗೆ ಸುಸಜ್ಜಿತವಾಗಿರುತ್ತದೆ. ಈ ಹೊಸ ಐಯಾನಿಕ್ 5 ಎಲೆಕ್ಟ್ರಿಕ್ ಕಾರಿನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಎಮರ್ಜನ್ಸಿ ಬ್ರೇಕಿಂಗ್, ಲೇನ್ ಕೀಪ್ ಮತ್ತು ಡಿಪಾರ್ಚರ್ ಏಡ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಸಿಸ್ಟಮ್‌ನಂತಹ ವೈಶಿಷ್ಟ್ಯಗಳೊಂದಿಗೆ ADAS (ಅಡ್ವಾನ್ಸ್ಡ್ ಡ್ರೈವರ ಅಸಿಸ್ಟ್ ಸಿಸ್ಟಂ) ನೊಂದಿಗೆ ಬರುತ್ತದೆ.