ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಯವರ ತಾಯಿ ಹೀರಾಬೆನ್ ಮೋದಿ ಇಂದು ಬೆಳಗ್ಗಿನ ಜಾವ 3.39ರ ಸುಮಾರಿಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

Ad Widget ... ..

ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು

Ad Widget

ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಪ್ರಧಾನಿಯವರು ತಮ್ಮ ಪಶ್ಚಿಮ ಬಂಗಾಳ ಪ್ರವಾಸ ರದ್ದುಗೊಳಿಸಿದ್ದು, ತಾಯಿಯ ಅಂತಿಮ ದರ್ಶನ ಪಡೆಯಲಿದ್ದಾರೆ.

Leave a Comment

Your email address will not be published. Required fields are marked *