Ad Widget .

ದ.ಕ ಜಿಲ್ಲೆಯಲ್ಲಿ ಜಾನುವಾರು ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಆದೇಶ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತ ಮುಂದಾಗಿದ್ದು,  ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.

Ad Widget . Ad Widget . Ad Widget .

ಜಿಲ್ಲೆಯ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. ಜಾನುವಾರುಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಾಣಿಕೆ ಮಾಡುವುದರಿಂದ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ರೋಗದ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *