ಸುಳ್ಯ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಆಸ್ಪತ್ರೆಯಲ್ಲಿ ಸಾವು

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ್ದ ಸುಳ್ಯದ ಕಾಂಗ್ರೆಸ್ ನಾಯಕ ಸುಧೀರ್ ರೈ ಮೇನಾಲ(48 ವರ್ಷ) ಅವರು ಇಂದು(ಜ.೧) ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿಧಿವಶರಾದರು.

Ad Widget ... ..

ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಅಕ್ರಮ ಸಕ್ರಮ ಸಮಿತಿ ಮಾಜಿ ಸದಸ್ಯರಾಗಿದ್ದರು. ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Ad Widget

ಕಳೆದ ಮೂರು ದಿನಗಳ ಹಿಂದೆ ಅಜ್ಜಾವರ ತೆರಳುವ ಮಾರ್ಗ ಮಧ್ಯೆ ವಿಷ ಸೇವನೆ ಮಾಡಿ ಮನೆಗೆ ಹೋಗಿದ್ದರು. ವಿಷ ಸೇವಿಸಿದ ವಿಷಯ ಮನೆಯವರಿಗೆ ತಿಳಿಯುತ್ತಿದ್ದಂತೆ ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದೆರಡು ದಿನಗಳಿಂದ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾದರು.

ಸುಳ್ಯ ಕಾಂಗ್ರೆಸ್ ನ ಸಕ್ರಿಯ ನಾಯಕರಲ್ಲಿ ಒಬ್ಬರಾಗಿದ್ದ ಅವರು ರಾಜಕೀಯ ಸೇರಿದಂತೆ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹೆಸರು ಗಳಿಸಿದ್ದರು. ಪಕ್ಷಾತೀತವಾಗಿ ಅಪಾರ ಸ್ನೇಹಿತವರ್ಗವನ್ನೇ ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಚೇತರಿಸಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಹಾಗೂ ಪುತ್ರ, ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *