ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ಸ್ಫೋಟ : ಕಾರ್ಮಿಕರಿಗೆ ಗಾಯ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಇಂದು ಮದ್ಯಾಹ್ನ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

Ad Widget ... ..

ವಿಮಾನ ನಿಲ್ದಾಣದ ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿಗಳಿಂದ ನಡೆಯತ್ತಿತ್ತು. ಸ್ಥಳದಲ್ಲಿ ರಾಸಾಯನಿಕ ಡಬ್ಬಿ ಹಾಗೂ ಇತರೆ ಸಲಕರಣೆಗಳನ್ನು ಇರಿಸಲಾಗಿತ್ತು. ಇಂದು ಕೆಲಸಗಾರರು ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಇದೇ ಸಂದರ್ಭದಲ್ಲೇ ಏಕಾಏಕಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ 6 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರತಾ ಸಿಬ್ಬಂದಿ ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು ನಿಲ್ದಾಣದ ಅಗ್ನಿಶಾಮಕ ಸಿಬ್ಬಂದಿ, ಎರಡೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *