ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ.

Ad Widget ... ..

ಆದರೆ ಬಾಲಕಿಯರ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

Ad Widget

1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ. ಯಾವುದೇ ಗಾಯಗಳು ಇಲ್ಲ ಎಂದು ಚಿತ್ರದುರ್ಗ‌ ಜಿಲ್ಲಾಸ್ಪತ್ರೆಯ ವೈದ್ಯರು ಕೋರ್ಟ್​​​ಗೆ ಸಂತ್ರಸ್ತ ಬಾಲಕಿಯರ ಮೆಡಿಕಲ್ ರಿಪೋರ್ಟ್ ಸಲ್ಲಿಸಿದ್ದಾರೆ. ಈಗಾಗಲೇ ಪೊಲೀಸರು ಸಲ್ಲಿಸಿದ ಚಾರ್ಜ್ ಶೀಟ್​ನಲ್ಲಿಯೂ ಮೆಡಿಕಲ್ ರಿಪೋರ್ಟ್ ಬಗ್ಗೆ ಉಲ್ಲೇಖಿಸಲಾಗಿತ್ತು. ಸದ್ಯ ಮುರುಘಾಶ್ರೀ ವಿರುದ್ದದ ಫೋಕ್ಸೋ ಕೇಸ್ ಗೆ ಟ್ವಿಸ್ಟ್ ಸಿಗುವ ಸಾಧ್ಯತೆ ಇದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಚಿತ್ರದುರ್ಗ‌ ಜಿಲ್ಲಾಸ್ಪತ್ರೆ ವೈದ್ಯರ ವರದಿ ಬಗ್ಗೆ ಮಾಹಿತಿ ಇಲ್ಲ. ಅಂತೆ ಕಂತೆ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮುರುಘಾಶ್ರೀ ಸೇರಿದಂತೆ ಎಲ್ಲರನ್ನೂ ಬಂಧಿಸಲಾಗಿದೆ. ಪ್ರಕರಣದ ತನಿಖೆ ವೇಳೆ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ ಎಂದಿದ್ದಾರೆ.

Leave a Comment

Your email address will not be published. Required fields are marked *