ಸಮಗ್ರ ನ್ಯೂಸ್: ಸುಳ್ಯ ಜಾತ್ರೋತ್ಸವದಲ್ಲಿ ಎಲ್ಲ ಧರ್ಮೀಯರಿಗೆ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಸಭೆಯಲ್ಲಿ ಈ ಮೊದಲು ಘೋಷಿಸಲಾಗಿದ್ದು, ಇದನ್ನು ಹಿಂದೂ ಸಂಘಟನೆಗಳು ವಿರೋಧ ಮಾಡಿದ್ದವು.
ಈ ಕುರಿತಂತೆ ಇಂದು ತುರ್ತು ಸಭೆ ನಡೆಸಿದ ಹಿಂದೂ ಸಂಘಟನೆಗಳ ಪ್ರಮುಖರು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಮಾಡಿದ್ದರು. ತಕ್ಷಣ ಇದಕ್ಕೆ ಸ್ಪಂದಿಸಿದ ಡಾ|ಕೆ.ವಿ. ಚಿದಾನಂದ ಅವರು ತುರ್ತು ಸಭೆಯನ್ನು ಕರೆದಿದ್ದರು. ಅದರಂತೆ ಎಲ್ಲರ ನಿರ್ಣಯವನ್ನು ತೆಗೆದುಕೊಂಡು ಅಂತಿಮವಾಗಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಎಂಬ ನಿರ್ಧಾರಕ್ಕೆ ಬರಲಾಯಿತು.
ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರ ನಡೆಸಲು ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಸುಳ್ಯ ತಾಲೂಕು ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಸಲ್ಲಿಸಿದ್ದರು.