ಸಮಗ್ರ ನ್ಯೂಸ್: ಯಶವಂತಪುರ ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಡ್ರಮ್ ಪರಿಶೀಲನೆ ಮಾಡಿದಾಗ ಕೊಳೆತ ಸ್ಥಿತಿಯಲ್ಲಿರುವ ಯುವತಿ ದೇಹ ಪತ್ತೆಯಾಗಿದೆ
ಯಶವಂತಪುರ ರೈಲ್ವೇ ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ ನ ಬಾಕ್ಸ್ ಒಂದರಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 23 ವರ್ಷದ ಯುವತಿ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಕವರ್ ಒಂದರಲ್ಲಿ ಸೀಲ್ ಮಾಡಿಟ್ಟಿದ್ದರು. ಇಂದು ವಾಸನೆ ಬಂದಾಗ ನೋಡಿಕೊಂಡಿರುವ ರೈಲ್ವೇ ಪೊಲೀಸರು ತೆಗೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ. ಸದ್ಯ ಯುವತಿಯ ಗುರುತು ಪತ್ತೆ ಹಚ್ಚುತ್ತಿರುವ ಯಶವಂತಪುರ ರೈಲ್ವೇ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಶವದ ಕುತ್ತಿಗೆಯಲ್ಲಿ ಬಿಳಿ ಬಣ್ಣದ ದುಪ್ಪಟ್ಟದಿಂದ ಗಂಟು ಬಿಗಿದಿರುವುದು ಪತ್ತೆಯಾಗಿದೆ. ಸುಮಾರು 23 ವರ್ಷ ವಯಸ್ಸಿನ ಮಹಿಳೆ ಮೃತದೇಹ ಎಂದು ಅಂದಾಜಿಸಲಾಗಿದೆ. ಇನ್ನು ಕೊಲೆ ಮಾಡಿ ಸಾಕ್ಷ್ಯ ನಾಶ ಪಡಿಸಲು ಡ್ರಮ್ ನಲ್ಲಿ ಶವ ಹಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಶವ ಕೊಳೆಯುವಂತೆ ಕೆಮಿಕಲ್ ಡ್ರಮ್ ನಲ್ಲಿ ದುಷ್ಕರ್ಮಿಗಳು ಹಾಕಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.