ಕೋಲಾರದಿಂದಲೇ ಮುಂದಿನ ಸ್ಪರ್ಧೆ| ಅಧಿಕೃತವಾಗಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ ನೀಡಿದ್ದು, ಕಾರ್ಯಕರ್ತರ ಸಮಾವೇಶದಲ್ಲಿ ತಾವು ಕೋಲಾರದಿಂದ ಸ್ಪರ್ದಿಸುವ ಕುರಿತು ಘೋಷಣೆ ಮಾಡಿದ್ದಾರೆ.

Ad Widget ... ..

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಕೋಲಾರಕ್ಕೆ ಹೋಗಿ ಬಂದಿರುವ ಸಿದ್ದರಾಮಯ್ಯ ಇದೀಗ ಮತ್ತೆ ಕೋಲಾರಕ್ಕೆ ಬಂದಿದ್ದಾರೆ. ಈ ವಿಚಾರ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಇದೇ ವೇಳೆ ಕೋಲಾರದಲ್ಲಿ ಅಧಿಕೃತವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

Ad Widget

ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಇತ್ತ ಸಿದ್ದರಾಮಯ್ಯನವರು ತಮಗೆ ಕೈ ಹಿಡಿದ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಸದ್ಯ ಕೋಲಾರದ ಕಡೆ ಮುಖಮಾಡಿರುವ ಸಿದ್ದರಾಮಯ್ಯ ಈ ಬಾರಿ ಅಲ್ಲಿಂದಲೇ ಸ್ಪರ್ಧೆ ಮಾಡುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ.

Leave a Comment

Your email address will not be published. Required fields are marked *