ಸಮಗ್ರ ನ್ಯೂಸ್: ಹೈಕೋರ್ಟ್ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬುವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಈಗ ವಿಚಾರಣೆ ನಡೆಸಿರುವ ಹೈಕೋರ್ಟ್, ಅಂತಿಮ ತೀರ್ಪು ನೀಡುವತನಕ ಸರ್ಕಾರ ಈ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದೆ.
ಇತ್ತೀಚೆಗೆ ಮಹತ್ತರ ರಾಜಕೀಯ ಬೆಳವಣಿಗೆಯೊಂದರಲ್ಲಿ 3A ಕ್ಯಾಟಗರಿಯಲ್ಲಿದ್ದ ಒಕ್ಕಲಿಗರಿಗೆ 2C ಅಡಿಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟ ಸಮ್ಮತಿ ಸೂಚಿಸಿತ್ತು. ಅಲ್ಲದೇ 3B ಕ್ಯಾಟಗರಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2D ಅಡಿಯಲ್ಲಿ ಮೀಸಲಾತಿ ನೀಡುವ ತೀರ್ಮಾನಕ್ಕೆ ಬಂದಿತ್ತು.