ಸಮಗ್ರ ನ್ಯೂಸ್: ಅತಿಥೇಯ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾವನ್ನು ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ಮಾಡಿ ತಲಾ 3 ವಿಕೆಟ್ ಪಡೆಯುವ ಮೂಲಕ ಕೇವಲ 215 ರನ್ ಗಳಿಗೆ ಕಟ್ಟಿ ಹಾಕಲಾಯಿತು.
ಲಂಕಾ ನೀಡಿದ 216 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. ರೋಹಿತ್ ಶರ್ಮಾ 17, ಶುಭ್ಮನ್ ಗಿಲ್ 21, ವಿರಾಟ್ ಕೊಹ್ಲಿ 4 ಮತ್ತು ಶ್ರೇಯಸ್ ಅಯ್ಯರ್ 28 ರನ್ ಗಳಿಗೆ ಆಲೌಟ್ ಆಗಿದ್ದು 86 ರನ್ ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಗಳು ಪತನಗೊಂಡಿತ್ತು. ಈ ವೇಳೆ ತಾಳ್ಮೆಯ ಆಟವಾಡಿದ ಕೆಎಲ್ ರಾಹುಲ್ ಅರ್ಧ ಶತಕ ಸಿಡಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಇನ್ನುಳಿದಂತೆ ಹಾರ್ದಿಕ್ ಪಾಂಡ್ಯ 36, ಅಕ್ಷರ್ ಪಟೇಲ್ 21 ಹಾಗೂ ಕುಲದೀಪ್ ಯಾದವ್ ಅಜೇಯ 10 ರನ್ ಬಾರಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ಲಹಿರು ಕುಮಾರ, ಚಮಿಕಾ ಕರುಣಾರತ್ನೆ ತಲಾ 2 ವಿಕೆಟ್ ಪಡೆದಿದ್ದಾರೆ.
ಆತಿಥೇಯ ಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-0 ಅಂತರದಿಂದ ಗೆಲುವು ಸಾಧಿಸಿ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇನ್ನು ಮೂರನೇ ಹಾಗೂ ಅಂತಿಮ ಪಂದ್ಯ ಔಪಚಾರಿಕವಾಗಿ ಜನವರಿ 15ರಂದು ತಿರುವನಂತಪುರಂದಲ್ಲಿ ನಡೆಯಲಿದೆ.