ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವೀಡಿಯೋ ಲಿಂಕ್ ಮೂಲಕ ವಾರಣಾಸಿಯಲ್ಲಿ ವಿಶ್ವದ ಅತೀ ಉದ್ದದ ಕ್ರೂಸ್ ಎಂವಿ ಗಂಗಾ ವಿಲಾಸ್ಗೆ ಚಾಲನೆ ನೀಡಲಿದ್ದಾರೆ ಮತ್ತು ಹಲವಾರು ಇತರ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ₹ 1000 ಕೋಟಿಗೂ ಹೆಚ್ಚು ಮೌಲ್ಯದ ಹಲವಾರು ಒಳನಾಡು ಜಲಮಾರ್ಗ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಲಿದ್ದಾರೆ.
ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ – ಸರ್ಬಾನಂದ ಸೋನೋವಾಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಇತರ ಸಚಿವರು ಮತ್ತು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ಎಂವಿ ಗಂಗಾ ವಿಲಾಸ್ ಭಾರತದಲ್ಲಿ ತಯಾರಾದ ಮೊದಲ ಕ್ರೂಸ್ ಹಡಗು. ಇದು ರಿವರ್ ಕ್ರೂಸ್ ಸೆಕ್ಟರ್ನಲ್ಲಿ ಸ್ವಾವಲಂಬಿ ಭಾರತದ ಸಂಕೇತವಾಗಿದೆ.
MV ಗಂಗಾ ವಿಲಾಸ್ ಉತ್ತರ ಪ್ರದೇಶದ ವಾರಣಾಸಿಯಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ ಮತ್ತು ಬಾಂಗ್ಲಾದೇಶದ ಮೂಲಕ ಅಸ್ಸಾಂನ ದಿಬ್ರುಗಢವನ್ನು ತಲುಪಲು 51 ದಿನಗಳಲ್ಲಿ 3,200 ಕಿ.ಮೀ. ಕ್ರಮಿಸಲಿದೆ.