ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ

ಪುತ್ತೂರು: ವಿವಾಹ ನಿಶ್ಚಿತಾರ್ಥ ವಾಗಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಕುಳದಪಾರೆಯಲ್ಲಿ ನಡೆದಿದೆ. ನಿದಿಯಡ್ಕ ನಿವಾಸಿ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾ (25) ಮೃತ ಯುವತಿ.

Ad Widget ... ..

ಈಶ್ವರಮಂಗಲದ ಜೆರಾಕ್ಸ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿದ್ದ ಪ್ರಿಯ, ತನ್ನ ಮನೆಯಲ್ಲಿ ನಿನ್ನೆ ಯಾರು ಇಲ್ಲದ ಸಂಧರ್ಭ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಈ ಹಿಂದೆ ಪುತ್ತೂರು ತಾಲ್ಲೂಕಿನ ಬಡಗನ್ನೂರು ಸರ್ಕಾರಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಅದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *