ಹೋರಿ ಬೆದರಿಸುವ ಸ್ಪರ್ಧೆ ವೇಳೆ ಅವಘಡ; ಇಬ್ಬರು ಯುವಕರು ಸಾವು

ಸಮಗ್ರ ನ್ಯೂಸ್: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಈ ಘಟನೆ ನಡೆದಿದೆ.

Ad Widget ... ..

ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Ad Widget

ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದ ಅವಘಡದಲ್ಲಿ ರಂಗನಾಥ್ ಎಂಬುವವರು ಹೋರಿ ತಿವಿದು ಮೃತಪಟ್ಟಿದ್ದಾರೆ. ಮಾಳೂರಿನಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *