ಕಂಕಣ ಭಾಗ್ಯ ಕರುಣಿಸಲು ಕೊರಗಜ್ಜನ ಮೊರೆಹೋದ ನಟಿ ಪ್ರೇಮಾ

ಸಮಗ್ರ ನ್ಯೂಸ್: ಕಂಕಣ ಭಾಗ್ಯ ಕರುಣಿಸುವಂತೆ ಕೋರಿ ಸ್ಯಾಂಡಲ್‌ ವುಡ್‌ ನಟಿ ಪ್ರೇಮಾ ಕೊರಗಜ್ಜನ ಬಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾರಣಿಕದ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ದೇವರ ದರ್ಶನ ಪಡೆದರು.

Ad Widget ... ..

ಹಲವು ವರ್ಷಗಳ ಹಿಂದೆ ವಿಚ್ಛೇದನ ಪಡೆದು ಒಂಟಿಯಾಗಿ ಜೀವನ ಸಾಗಿಸುತ್ತಿರುವ ನಟಿ ಪ್ರೇಮಾ ಇದೀಗ 2ನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದು, ಕಂಕಣ ಭಾಗ್ಯ ಕರುಣಿಸುವಂತೆ ದೈವದ ಮೊರೆ ಹೋಗಿದ್ದಾರೆ.

Ad Widget

ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಮದುವೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಈ ವೇಳೆ ನಟಿ ಪ್ರೇಮಾ ಜೊತೆ ತಮ್ಮ ಅಯ್ಯಪ್ಪ, ಅವರ ಪತ್ನಿ ನಟಿ ಅನು ಅಯ್ಯಪ್ಪ ಕೂಡ ಇದ್ದರು.

Leave a Comment

Your email address will not be published. Required fields are marked *