ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ಅಶ್ವತ್ಥ ನಾರಾಯಣ| ಪ್ರತಿಭಟನೆ ಕೈ ಬಿಟ್ಟ ಅಂಗನವಾಡಿ ಸಿಬ್ಬಂದಿ

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪರಿಶೀಲಿಸುವ ಭರವಸೆ ನೀಡಿದೆ.

Ad Widget ... ..

ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆಗಳನ್ನು ಆಲಿಸಿದರು. ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇರುವ ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Ad Widget

ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನು ಕಾಲಕ್ಕೆ ತಕ್ಕಂತೆ ಪರಿಷ್ಕರಿಸುವುದನ್ನು ಗಮನಕ್ಕೆ ತೆಗೆದುಕೊಳ್ಳಲಾಗುವುದು. ಜತೆಗೆ ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಪರಿಕರಗಳನ್ನ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಿಯೋಗಕ್ಕೆ ತಿಳಿಸಿದರು.

ರಾಜ್ಯದಲ್ಲಿ 1.36 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರು ಇದ್ದಾರೆ. ಇವರ ಉಳಿದ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು. ಈ ಭರವಸೆ ಸಿಕ್ಕಿದ ಹಿನ್ನೆಲೆಯಲ್ಲಿ ಮುಷ್ಕರ ಕೈಬಿಡುವ ಭರವಸೆಯನ್ನು ಸಂಘಟನೆಯ ಮುಖ್ಯಸ್ಥೆ ಪ್ರೇಮಾ ಅವರು ಸಚಿವರಿಗೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮಂಜುಳಾ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *