ಮೈಸೂರು: ಚಿರತೆ ದಾಳಿಗೆ ಬಾಲಕ ಬಲಿ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನರಭಕ್ಷಕ ಚಿರತೆ ದಾಳಿಗೆ 11 ವರ್ಷದ ಬಾಲಕ ಬಲಿಯಾಗಿರುವ ಘಟನೆ ನಡೆದಿದೆ. ಟಿ.ನರಸೀಪುರ ತಾಲೂಕಿನ ಹೊರಹಳ್ಳಿಯಲ್ಲಿ ನಿನ್ನೆ ರಾತ್ರಿಯಿಂದ 11 ವರ್ಷದ ಬಾಲಕ ಸಂಜಯ್ ಕಾಣೆಯಾಗಿದ್ದ.

Ad Widget ... ..

ಬಳಿಕ ಇಂದು ಬೆಳಗ್ಗೆ ಬಾಲಕನ ರುಂಡವಿಲ್ಲದ ಮೃತದೇಹ ಪತ್ತೆಯಾಗಿದ್ದು, ನರಭಕ್ಷಕ ಚಿರತೆ ದಾಳಿ ಮಾಡಿ ಬಾಲಕನನ್ನು ಕೊಂದು ರುಂಡವನ್ನು ತಿಂದು ಹಾಕಿದೆ.

Ad Widget

ರಾತ್ರಿಯಿಂದ ಬಾಲಕ ಸಂಜಯ್ ಕಾಣೆಯಾಗಿದ್ದು, ಗ್ರಾಮಸ್ಥರು ರಾತ್ರಿಯೆಲ್ಲ ಬಾಲಕನಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ಇಂದು ಬೆಳಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದ್ದು, ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಮೂಲಕ ಚಿರತೆ ದಾಳಿಗೆ ಬಲಿಯಾದವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.

Leave a Comment

Your email address will not be published. Required fields are marked *